ಮಂಗಳೂರು: ಮಸಾಜ್ ಸೆಂಟರ್ ಗೆ ದಾಳಿ ಪ್ರಕರಣ: ಟಿವಿ ಚಾನೇಲ್ ಕ್ಯಾಮರಾಮ್ಯಾನ್ ಬಂಧನ

ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ ಚಾನೆಲ್‌ನ ಕ್ಯಾಮರಾಮ್ಯಾನ್ ಶರಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.
ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಬಂಧಿಸಿದ ಬೆನ್ನಿಗೆ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಶರಣ್‌ನನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಮಸಾಜ್ ಸೆಂಟರ್‌ಗೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ನುಗ್ಗಿ ದಾಂಧಲೆ ನಡೆಸುವಾಗ ಶರಣ್ ಕೂಡ ತೆರಳಿದ್ದ ಎನ್ನಲಾಗಿದೆ. ದಾಳಿಯ ಬಗ್ಗೆ ಮಾಹಿತಿ ಇದ್ದರೂ ಕೂಡ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಪೊಲೀಸರು ಶರಣ್‌ನನ್ನು ವಶಕ್ಕೆ ಪಡೆದಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ 2009ರ ಮಂಗಳೂರು ಪಬ್ ದಾಂಧಲೆ ಪ್ರಕರಣದ ಸಂದರ್ಭವೂ ದಾಂಧಲೆಕೋರರ ಜೊತೆ ತೆರಳಿ ಶರಣ್ ವೀಡಿಯೋ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದರು.