ಕೇರಳ: ಎಸ್‌ಡಿಪಿಐ ನಾಯಕನ ಮೇಲೆ ದಾಳಿ ನಡೆಸಿ ಹತ್ಯೆ
ಆಲಪ್ಪುಝ: ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ಕೆ.ಎಸ್ ಶಾನ್ ಅವರನ್ನು ಕಡಿದು ಹತ್ಯೆ ಮಾಡಲಾಗಿದೆ. ಕೊಲೆಯ ಹಿಂದೆ ಆರ್ ಎಸ್ ಎಸ್ ಸಂಘದ ಕೈವಾಡವಿದೆ ಇದೆ ಶಂಕಿಸಿದ್ದಾರೆ.
ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ಶಾನ್ ಅವರನ್ನು ಹಿಂಬಾಲಿಸಿದ ಕಾರಿನಲ್ಲಿದ್ದ ದುಷ್ಕರ್ಮಿಗಳು ಡಿಕ್ಕಿ ಹೊಡೆದಿದ್ದಾರೆ. ರಸ್ತೆಯಲ್ಲಿ ಹೋಗುತ್ತಿದ್ದ ಶಾನ್ ರವರನ್ನು ನಾಲ್ವರು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ತಲೆ, ಕೈಕಾಲು ಮತ್ತು ಕಿಬ್ಬೊಟ್ಟೆಗೆ ಗಾಯಗೊಂಡ ನಂತರ ತುರ್ತು ಶಸ್ತ್ರಚಿಕಿತ್ಸೆಗಾಗಿ ಶಾನ್ ಅವರನ್ನು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.
ತಕ್ಷಣ ಅವರನ್ನು ಎರ್ನಾಕುಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಲಪ್ಪುಝದ ಮನ್ನಂಚೇರಿಯಲ್ಲಿ ಶನಿವಾರ ರಾತ್ರಿ 7.30ಕ್ಕೆ ದಾಳಿ ನಡೆದಿದೆ.
ಘಟನೆ ಹಿನ್ನೆಲೆಯಲ್ಲಿ ಆಲಪ್ಪುಝ ಡಿವೈಎಸ್ಪಿ ಎಂ ಜಯರಾಜ್ ನೇತೃತ್ವದ ಪೊಲೀಸ್ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದೆ.





