January 31, 2026

“ಸತ್ಯದ ಕಡೆ ಹೋಗುತ್ತಿದ್ದೇನೆ ನನ್ನನ್ನು ಹುಡುಕಬೇಡಿ” ಎಂದು ಪತ್ರ ಬರೆದು B.Com ವಿದ್ಯಾರ್ಥಿ ನಾಪತ್ತೆ

0
image_editor_output_image-303494199-1737694941367.jpg

ಬೆಂಗಳೂರು: ಅಧರ್ಮದ ಜಗತ್ತನ್ನ ತೊರೆದು ಸತ್ಯದ ಕಡೆ ಹೋಗುತ್ತಿದ್ದೇನೆ, ನಾನು ವಿಷ್ಣುವಿನ ಮಗ, ನನ್ನನ್ನು ಹುಡುಕಬೇಡಿ ಎಂದು ಬರೆದು ಬೆಂಗಳೂರಿನ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ.

ಮೋಹಿತ್ ಋಷಿ ನಾಪತ್ತೆಯಾದ ವಿದ್ಯಾರ್ಥಿ. ವಿದ್ಯಾರಣ್ಯಪುರದ ನಿವಾಸಿ ಅರ್ಜುನ್ ಕುಮಾರ್ ಎಂಬುವವರ ಪುತ್ರ ಮೋಹಿತ್ ಋಷಿ ಬಿಇಎಲ್ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದ.

ಜನವರಿ 16ರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಮನೆಯಲ್ಲೇ ಮೊಬೈಲ್ ಬಿಟ್ಟು ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದಾನೆ. ಪುಸ್ತಕದಲ್ಲಿ ಅಸತ್ಯದ ಪ್ರಪಂಚದಲ್ಲಿ ಸತ್ಯ ಹುಡುಕಲು ಹೋಗುತ್ತಿದ್ದೇನೆ ಎಂದು ಬರೆದಿದ್ದಾನೆ.

Leave a Reply

Your email address will not be published. Required fields are marked *

error: Content is protected !!