ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಂದಿಗೆ ಪ್ರೀತಿಗೆ ಬಿದ್ದ ವಿವಾಹಿತೆ ಆತ್ಮಹತ್ಯೆ

ಧಾರವಾಡ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಂದಿಗೆ ಪ್ರೀತಿಗೆ ಬಿದ್ದ ಗೃಹಿಣಿ ತನ್ನ ಪತಿ ಬಿಟ್ಟು ಬಂದು ವರ್ಷದ ಬಳಿಕ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಧಾರವಾಡದ ಶ್ರೀನಗರ 1ನೇ ಕ್ರಾಸ್‌ನ ಮನೆಯಲ್ಲಿ ಘಟನೆ ನಡೆದಿದ್ದು, ಶ್ವೇತಾ ಗುದಗಾಪುರ (24) ನೇಣಿಗೆ ಶರಣಾದ ಗೃಹಿಣಿ.
ರಾಮದುರ್ಗ ಮೂಲದ ಶ್ವೇತಾ ಪತಿಯನ್ನು ಬಿಟ್ಟು ಧಾರವಾಡಕ್ಕೆ ಬಂದು ಕಳೆದ ಒಂದು ವರ್ಷದಿಂದ ವಾಸವಾಗಿದ್ದರು. ರಾಮದುರ್ಗದ ವಿಶ್ವನಾಥ ಜೊತೆಗೆ ಐದು ವರ್ಷದ ಹಿಂದೆ ವಿವಾಹವಾಗಿತ್ತು. ಆದರೆ ಎರಡು ವರ್ಷದಿಂದ ಪತಿಯಿಂದ ದೂರವಾಗಿದ್ದರು.