ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ 14 ಮಂದಿ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಮಂಗಳೂರು: ಮಂಗಳೂರಿನ ಬಿಜೈ ನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ರಾಮ್ ಸೇನೆ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ಗೆ ರಾಮ ಸೇನಾ ಕಾರ್ಯಕರ್ತರು ನಿನ್ನೆ ಏಕಾಏಕಿ ನುಗ್ಗಿ ದಾಳಿ ಮಾಡಿದ್ದರು. ಪಾರ್ಲರ್ನಲ್ಲಿ ಅನೈತಿಕ ಚಟುವಟಿಕೆಯ ಆರೋಪಿಸಿ ದಾಳಿ ಮಾಡಿದ್ದರು. ಪಾರ್ಲರ್ನ ಪೀಠೋಪಕರಣ, ಕನ್ನಡಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ಪುಡಿ ಗೈದು ದಾಂಧಲೆ ಎಸಗಿದ್ದರು.




