ಫೈನಾನ್ಸ್ ಸಾಲದ ಹೆಸರಲ್ಲಿ ಕಿರುಕುಳ: ನಾಲ್ವರು ಆರೋಪಿಗಳ ಬಂಧನ

ರಾಯಚೂರು: ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಒಂದೆಡೆಯಾದರೆ, ಇನ್ನೊಂದು ಕಡೆ ನಕಲಿ ಸಾಲ ರಿಕವರಿ ಟೀಂ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಫಯಾಜ್, ಶೇಖ್ ಎಂಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಸೀದ್ ಎಂದು ಗುರುತಿಸಲಾಗಿದೆ. ಈ ತಂಡ ಮೊಬೈಲ್ ಆ್ಯಪ್‌ನಲ್ಲಿ ಫೈನಾನ್ಸ್‌ಗಳ ಸಾಲ ಬಾಕಿ ಇರುವವರನ್ನ ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನ ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕುತ್ತಿದ್ದರು.