ಕಾರು ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ:
ಕಲಾವಿದೆ ಸೇರಿ ಮೂವರು ಮೃತ್ಯು
ಹೈದರಾಬಾದ್: ದೂರದರ್ಶನ ಧಾರಾವಾಹಿಗಳಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಜೂನಿಯರ್ ಆರ್ಟಿಸ್ಟ್‌ಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು ಮತ್ತೊಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಹೈದರಾಬಾದ್‌ನಲ್ಲಿ ನಡೆದಿದೆ.
ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ನ ಗಚಿಬೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಗಚ್ಚಿಬೌಲಿಯಿಂದ ಲಿಂಗಂಪಲ್ಲಿಗೆ ತೆರಳುತ್ತಿದ್ದ ಕಾರು ಅತಿವೇಗದಿಂದ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಾಹನ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ 25 ವರ್ಷದ ಬ್ಯಾಂಕ್ ಉದ್ಯೋಗಿ ಅಬ್ದುಲ್ ರಹೀಮ್ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದ ಕಿರಿಯ ಕಲಾವಿದರನ್ನು ಎನ್ ಮಾನಸ (23) ಮತ್ತು ಎಂ ಮಾನಸ (19) ಎಂದು ಗುರುತಿಸಲಾಗಿದೆ.
ಮತ್ತೋರ್ವ ಕಿರಿಯ ಕಲಾವಿದ ಸಾಯಿ ಸಿದ್ದು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೂ ಮುನ್ನ ಚಾಲಕ ಮದ್ಯ ಸೇವಿಸಿದ್ದ ಎಂದು ಬದುಕುಳಿದವರು ತಿಳಿಸಿದ್ದಾರೆ.
ಪೊಲೀಸರು ಮೃತರನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ರವಾನಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಇಬ್ಬರು ಜೂನಿಯರ್ ಆರ್ಟಿಸ್ಟ್‌ಗಳು ನಗರದ ಅಮೀರ್‌ಪೇಟ್ ಪ್ರದೇಶದ ಹಾಸ್ಟೆಲ್‌ನಲ್ಲಿ ತಂಗಿದ್ದರು. ಸಿದ್ದು ಮತ್ತು ಅಬ್ದುಲ್ ರಹೀಂ ಎಂಬುವರು ಕಾರನ್ನು ಬಾಡಿಗೆಗೆ ತೆಗೆದುಕೊಂಡಿದ್ದರು.





