ವಿಟ್ಲ ಹೊರೈಝನ್ ಶಾಲೆ: ಗಣರಾಜ್ಯೋತ್ಸವ
ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಶಾಲೆಯ ಅಧ್ಯಕ್ಷ ಅಝೀಝ್ ಸನ ಹಾಗೂ ವಿಟ್ಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಇವರು ಧ್ವಜಾರೋಹಣ ಮಾಡಿದರು.
ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ .ಅಶ್ರಫ್, ಕಾರ್ಯದರ್ಶಿ ಅಬೂಬಕರ್ ನೋಟರಿ, ಟ್ರಸ್ಟಿಗಳಾದ ಝುಬೈರ್ ಮಾಸ್ಟರ್, ಅಬ್ದುಲ್ ಹಮೀದ್ ಬದ್ರಿಯಾ, ಇಕ್ಬಾಲ್ ಶೀತಲ್, ಕೋಶಾಧಿಕಾರಿ ಅಂದುಞಿ ಗಮಿ, ಮಸೀದಿಯ ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ, ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ಮುಂತಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಮನಾಝಿರ್
ಮುಡಿಪು ಸ್ವಾಗತಿಸಿದರು. ರೈಹಾನ ವಂದಿಸಿ, ಶದಾ ನಿರೂಪಿಸಿದರು.




