March 18, 2026

ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image1935060890-1737958649498.jpg

ಮಣಿಪಾಲ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಕಳೆದ 15ವರ್ಷಗಲಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

80 ಬಡಗಬೆಟ್ಟು ನಿವಾಸಿ ಬಾಲಾಜಿ ಎಂ. ಬಂಧಿತ ಆರೋಪಿ. ಪ್ರರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 15 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತನನ್ನು ಜ.24ರಂದು ಬೆಂಗಳೂರು ಹರಳೂರು ಬಸ್ಸು ನಿಲ್ದಾಣ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.

ಈ ಕಾರ್ಯಾಚರಣೆಯಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕರ ದೇವರಾಜ್ ಟಿ.ವಿ., ಎಸ್ಸೈಗಳಾದ ಅನಿಲ್ ಕುಮಾರ, ಅಕ್ಷಯ ಕುಮಾರಿ, ಸಿಬ್ಬಂದಿ ಥಾಮ್ಸನ್, ಪಿಸಿ ರವಿರಾಜ್ ಪಾಲ್ಗೊಂಡಿದ್ದರು. ಆರೋಪಿಯನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!