ಉಡುಪಿ:5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ಬಂಧನ

ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ.
ಈತ ಜ.23ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.