ಪತ್ನಿಯ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ
ಹುಬ್ಬಳ್ಳಿ: ಹೆಂಡತಿ ಕಾಟಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹೆಂಡತಿ ಕಿರುಕುಳ ತಾಳಲಾರದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪೀಟರ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸಾವಿಗೂ ಮುನ್ನ ಡೆತ್ ನೋಟ್ ಬರೆದಿರುವ ಪೀಟರ್, `ಡ್ಯಾಡಿ ಆಯಮ್ ಸಾರಿ, ಪಿಂಕಿ ಇಸ್ ಕಿಲ್ಲಿಂಗ್ ಮೀ ಸೀ ವಾಂಟ್ ಮೈ ಡೆತ್ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.




