ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿ ಆತ್ಮಹತ್ಯೆ

ದಾವಣಗೆರೆ: ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ಪುಷ್ಪಲತ (46) ಅತ್ಮಹತ್ಯೆಗೆ ಶರಣಾದ ಶಿಕ್ಷಕಿ ಎಂದು ತಿಳಿದು ಬಂದಿದೆ. ಅವರು ತುಂಗಾಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊನ್ನಾಳಿಯಲ್ಲಿ ಮನೆ ಕಟ್ಟಲು ಶಿವಮೊಗ್ಗ ಮೂಲದ ಖಾಸಗಿ ಮೈಕ್ರೋ ಫೈನಾನ್ಸ್ ಹಾಗೂ ಕೈಗಡವಾಗಿ ಲಕ್ಷಾಂತರ ರೂ. ಸಾಲ ಮಾಡಿದ್ದರು.