ವಿಮಾನದಲ್ಲಿ ತಾಂತ್ರಿಕ ದೋಷ: ಮಂಗಳೂರು-ದಮ್ಮಾಮ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಹಾರಾಟ ರದ್ದು
ಮಂಗಳೂರು: ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ರಾತ್ರಿ ಹೊರಡಬೇಕಾಗಿದ್ದ ಮಂಗಳೂರು-ದಮ್ಮಾಮ್ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಹಾರಾಟ ರದ್ದಾಗಿದೆ.
ಮಂಗಳೂರು- ದಮಾಮ್ (ಸೌದಿ ಅರೇಬಿಯಾ) ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಜೆ ಏಳು ಗಂಟೆಗೆ ಟೇಕ್ ಆಫ್ ಆಗಬೇಕಿತ್ತು. ಆದರೆ, ತಾಂತ್ರಿಕ ತೊಂದರೆ ಕಂಡುಬಂದ ಹಿನ್ನೆಲೆಯಲ್ಲಿವಿಮಾನದ ಹಾರಾಟ ರದ್ದಾಗಿದೆ
ಪ್ರಯಾಣಿಕರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಒಂದು ಗಂಟೆ ತಡವಾದರೂ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದರು.




