March 18, 2025

ಬಂಟ್ವಾಳ: ಬಾಲಕಿಯ ಅತ್ಯಾಚಾರ, ಗರ್ಭಿಣಿ ಪ್ರಕರಣ: ಯುವಕನಿಗೆ 20 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

0

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣವಾದ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ.

ಬಂಟ್ವಾಳದ 24 ವರ್ಷ ಪ್ರಾಯದ ಯುವಕ ಶಿಕ್ಷೆಗೆ ಒಳಗಾದ ಅಪರಾಧಿ. ಆತ 14 ವರ್ಷದ ಬಾಲಕಿಯನ್ನು ಮೊಬೈಲ್ ಮೂಲಕ ಪರಿಚಯಿಸಿಕೊಂಡು ಆಕೆಯ ಮನೆಗೆ ತೆರಳಿ ಆಕೆಯ ಮೇಲೆ ನಿರಂತರ ಅತ್ಯಾಚಾರವೆಸಗಿದ್ದ, ಬಾಲಕಿಯ ದೇಹದಲ್ಲಿ ಆದ ಬದಲಾವಣೆ ಗಮನಿಸಿ ತಾಯಿಯು ಆಕೆಯ ಆರೋಗ್ಯ ತಪಾಸಣೆ ಮಾಡಿಸಿದ್ದರು. ಬಾಲಕಿ ಆರು ತಿಂಗಳ ಗರ್ಭಿಣಿಯಾಗಿರುವುದು ಆರೋಗ್ಯ ತಪಾಸಣೆ ವೇಳೆ ಗೊತ್ತಾಗಿತ್ತು. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಅನಂತ ಪದ್ಮನಾಭ ಕೆ.ವಿ ಅವರು ಪ್ರಕರಣ ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು.

ಸಂತ್ರಸ್ತ ಬಾಲಕಿ ನಂತರ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣದಲ್ಲಿ ಒಟ್ಟು 20 ಸಾಕ್ಷಿದಾರರ ವಿಚಾರಣೆ ನಡೆಸಲಾಗಿತ್ತು. 30 ದಾಖಲೆಗಳನ್ನು ಗುರುತಿಸಲಾಗಿತ್ತು. ಈ ಕೃತ್ಯವನ್ನು ತಾನು ಎಸಗಿಲ್ಲ ಎಂದು ಸಾದಿಕ್ ವಾದಿಸಿದ್ದ. ಮಗುವಿನ ಡಿ.ಎನ್.ಎ ಪರೀಕ್ಷೆಯ ವರದಿಯಲ್ಲಿ ಆತನೇ ಮಗುವಿನ ಜೈವಿಕ ತಂದೆ ಎಂಬುದು ಸಾಬೀತಾಗಿತ್ತು ಎಂದು ಸರ್ಕಾರಿ ವಕೀಲ ಕೆ.ಬದರಿನಾಥ ನಾಯರಿ ತಿಳಿಸಿದ್ದಾರೆ
ಇದೀಗ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ-2ರ (ಪೊಕ್ಕೊ) ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು 20 ವರ್ಷಗಳ ಕಠಿಣ ಕಾರಗೃಹ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!