December 16, 2025

ಮೊಬೈಲ್ ನೋಡಬೇಡ ಎಂದ ಪೋಷಕರು: ನೇಣಿಗೆ ಶರಣಾದ 13 ವರ್ಷದ ಬಾಲಕ

0
image_editor_output_image1415580481-1738138762587.jpg

ಬೆಂಗಳೂರು: ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವೇಳೆ ಅಣ್ಣ ಏನು ಮಾಡುತ್ತಿದ್ದಾನೆ ಎಂಬ ಅರಿವು ಇಲ್ಲದೆ ತಂಗಿ ಸುಮ್ಮನೆ ನೋಡುತ್ತಿದ್ದಳು.

ಧ್ರುವ ಪೋಷಕರು ಕೆಲಸಕ್ಕೆ ತೆರಳಿದ್ದರು, ಸಂಜೆ ಮನೆಗೆ ಶಾಲೆಯಿಂದ ಬಂದ ಧ್ರುವ ಪ್ಯಾಂಟ್ ತೆಗೆದು ಸೊಂಟದ ಉಡದಾರ ಫ್ಯಾನ್‌ಗೆ ಕಟ್ಟಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಂಜೆ 7 ಗಂಟೆಯ ಸುಮಾರಿಗೆ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆಗ ಉಡದಾರ ಕುತ್ತಿಗೆಗೆ ಬಿಗಿದು, ತುಂಡಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಅಣ್ಣ ಏನು ಮಾಡಿಕೊಳ್ಳುತ್ತಿದ್ದಾನೆ ಎಂಬ ಅರಿವು ಇಲ್ಲದೇ ತಂಗಿ ಸುಮ್ಮನೆ ನೋಡುತ್ತಿದ್ದಳು. ಬಾಲಕ ಕೆಳಗೆ ಬಿದ್ದ ಸಮಯಕ್ಕೆ ಕೆಲಸ ಮುಗಿಸಿ ತಾಯಿ ಬಂದಿದ್ದಾರೆ. ಘಟನೆ ನೋಡಿ ಆತಂಕಗೊಂಡ ತಾಯಿ ಅಕ್ಕಪಕ್ಕದವರ ಸಹಾಯ ಪಡೆದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಬಾಲಕನನ್ನು ಪರೀಕ್ಷಿಸಿದ ವೈದ್ಯರು ಆತ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!