ಮಹಾಕುಂಭ ಮೇಳದಲ್ಲಿ ನುಗ್ಗಲಿನಿಂದಾಗಿ ಕಾಲ್ತುಳಿತ: ಹಲವರು ಸಾವನಪ್ಪಿರುವ ಸಾಧ್ಯತೆ
ಪ್ರಯಾಗ್ ರಾಜ್: ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜನವರಿ 13ರಂದು ಆರಂಭವಾದ ಮಹಾಕುಂಭ ಮೇಳಕ್ಕೆ ಈ ಬಾರಿ ಅತ್ಯಧಿಕ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದು, ಇದುವರೆಗೆ ಸುಮಾರು 15 ಕೋಟಿ ಮಂದಿ ಸಂಗಮಕ್ಷೇತ್ರದಲ್ಲಿ ಪವಿತ್ರಸ್ನಾನ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣ ಎರಡನೇ ಅಮೃತ ಸ್ನಾನ ಕೈಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.





