ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂಟರ್ನೆಟ್ ಸಂಪರ್ಕ: 50,000 ಅಟಲ್ ಟಿಂಕರಿಂಗ್ ಲ್ಯಾಬ್‌ಗಳ ಸ್ಥಾಪನೆ

ಹೊಸದಿಲ್ಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಸತತ ಎಂಟನೇ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಇದು ಮೋದಿ 3.0 ಅವಧಿಯ ಎರಡನೇ ಪೂರ್ಣ ಬಜೆಟ್ ಆಗಿದೆ.
ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಉಪಕ್ರಮಗಳನ್ನು ಘೋಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್, ಎಲ್ಲಾ ಸರ್ಕಾರಿ ಮಾಧ್ಯಮಿಕ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸಲಾಗುವುದು ಎಂದು ಹೇಳಿದರು.
“ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು 50,000 ಅಟಲ್ ಟಿಂಕರಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು” ಎಂದು ಇದೇ ವೇಳೆ ಸಚಿವೆ ಘೋಷಿಸಿದರು.