March 19, 2026

ಮಂಗಳೂರು: ನಾಟೆಕಲ್ ಖಾಸಗಿ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ

0
image_editor_output_image1984876905-1738395060521.jpg

ಕಿನ್ಯ: ಶಾಲಾ ಮಕ್ಕಳ ಸಾಗಾಟದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಕಿನ್ಯ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೀಂಪ್ರಿ ಬಳಿ ಶನಿವಾರ ಬೆಳಗ್ಗೆ ನಡೆದಿದೆ.

ನಾಟೆಕಲ್ ನ ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಇದಾಗಿದೆ. ಘಟನೆಯಲ್ಲಿ ಸಣ್ಣಪುಟ್ಟ ತರಚು ಗಾಯಗಳೊಂದಿಗೆ ಮಕ್ಕಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!