ಶಾಲಾ ವಾಹನ ಮರಕ್ಕೆ ಢಿಕ್ಕಿ: ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯ

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದಿದ್ದು. ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ದಾವಣಗೆರೆ ತಾಲ್ಲೂಕಿನ ಆನಗೋಡು- ಶಿವಪುರ ಮಾರ್ಗ ಮಧ್ಯ ಅಪಘಾತ ಸಂಭವಿಸಿದ್ದು. ದಾವಣಗೆರೆಯ ಜೈನ್ ಪಬ್ಲಿಕ್ ಸ್ಕೂಲ್ಗೆ ಸೇರಿದ್ದ ಶಾಲಾ ಬಸ್ ಅಪಘಾತವಾಗಿದ್ದು. ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಕರೆದೊಯ್ಯವು ವೇಳೆ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಮರಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದ್ದು. ಸ್ಥಳೀಯರು ಮಕ್ಕಳನ್ನು ರಕ್ಷಣೆ ಮಾಡಿ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.