March 10, 2025

ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟದ ಪ್ರಕರಣ ಸಹಿತ 13 ಪ್ರಕರಣ: ಆರೋಪಿ ಭರತ್ ಶೆಟ್ಟಿ ವಿರುದ್ಧ ಗೂಂಡಾ ಕೇಸ್ ದಾಖಲಿಸಿ ಬಂಧನ

0

ಸುರತ್ಕಲ್: ಮಸೀದಿಗೆ ಕಲ್ಲು ತೂರಾಟದ ಪ್ರಕರಣ ಸಹಿತ 13 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಆರೋಪಿಯೋರ್ವನನ್ನು ಸುರತ್ಕಲ್ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಬಂಧಿತ ಭರತ್ ಶೆಟ್ಟಿ ಕಾಟಿಪಳ್ಳ ಮಸೀದಿಗೆ ಕಲ್ಲು ತೂರಾಟದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬರುತ್ತಿದ್ದಂತೆ ವಶಕ್ಕೆ ಪಡೆದ ಪೊಲೀಸರು ಗೂಂಡಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತನನ್ನು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

 

ಆರೋಪಿ ಭರತ್‌ ಶೆಟ್ಟಿ ವಿರುದ್ಧದ ಕಾನೂನು ಕ್ರಮಗಳ ಹೊರತಾಗಿಯೂ ಈತ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರೆಸಿದ್ದು, ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತಿದ್ದಾನೆ. ಕಾಳಧನಿಕರು, ಮಾದಕ ವ್ಯಸನಿಗಳು, ಜೂಜುಕೋರರು, ಗೂಂಡಾಗಳು, ಅನೈತಿಕ ಸಂಚಾರ ಅಪರಾಧಿಗಳ ಅಪಾಯಕಾರಿ ಚಟುವಟಿಕೆಗಳನ್ನು ಕರ್ನಾಟಕ ತಡೆಗಟ್ಟುವಿಕೆ ಸೆಕ್ಷನ್ 3ರ ಅಡಿಯಲ್ಲಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವ, ಸ್ಲಂ ಗ್ರಾಬರ್ಸ್ ಮತ್ತು ವೀಡಿಯೊ ಅಥವಾ ಆಡಿಯೊ ಪೈರೇಟ್ಸ್ ಆಕ್ಟ್, 1985 (ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!