ಉಡುಪಿ: ನಕ್ಸಲ್ ಲಕ್ಷ್ಮೀ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣು

ಉಡುಪಿ: ಕರ್ನಾಟಕದಲ್ಲಿ ನಕ್ಸಲ್ ಶರಣಾಗತಿ ಮುಂದುವರೆದಿದೆ. ಕಳೆದ 20 ವರ್ಷಗಳಿಂದ ನಾಪತ್ತೆಯಾಗಿದ್ದು, ಪೊಲೀಸರಿಗೆ ವಾಂಟೆಂಡ್ ನಕ್ಸಲ್ ಆಗಿರುವ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.
ಇತ್ತೀಚೆಗೆ ನಕ್ಸಲ್ ನಾಯಕ ವಿಕ್ರಂ ಗೌಡ ಶೂಟೌಟ್ ನಂತರ ಬಹುತೇಕ ಕರ್ನಾಟಕದ ಎಲ್ಲಾ ನಕ್ಸಲ್ ಶರಣಾಗತಿ ಹಾದಿ ಹಿಡಿದಿದ್ದಾರೆ. ಈಗಾಗಲೇ ನಕ್ಸಲ್ ಚಟುವಟಿಕೆಯಲ್ಲಿದ್ದ ಎಲ್ಲರೂ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ನಡುವೆ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ತೊಂಬಟ್ಟುವಿನ ಲಕ್ಷ್ಮೀ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ.