ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿ
ಬಳ್ಳಾರಿ: ಕುರಿ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 40ಕ್ಕೂ ಹೆಚ್ಚು ಕುರಿಗಳು ಬೆಂಕಿಗೆ ಆಹುತಿಯಾದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಅಮಲಾಪುರ ಗ್ರಾಮದಲ್ಲಿ ನಡೆದಿದೆ.
ಅಗಸರ ಶೇಖರಪ್ಪ ಎಂಬ ರೈತರಿಗೆ ಸೇರಿದ ಕಣಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಣದಿಂದ ಪಕ್ಕದಲ್ಲಿದ್ದ ಕುರಿಗಳನ್ನು ಕಟ್ಟಿ ಹಾಕಿದ್ದ ಶೆಡ್‌ಗೆ ಸಹ ಬೆಂಕಿ ತಗುಲಿದೆ. ಘಟನೆ ವೇಳೆ ಯಾರು ಇಲ್ಲದೇ ಇದ್ದಿದ್ದರಿಂದ ಎಲ್ಲಾ ಕುರಿಗಳು ಸಾವನ್ನಪ್ಪಿವೆ.




