ಇನ್ಮುಂದೆ ಗೋಹತ್ಯೆ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ: ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಎಚ್ಚರಿಕೆ
ಕಾರವಾರ: ಇನ್ಮುಂದೆ ಗೋಹತ್ಯೆ ಏನಾದ್ರೂ ನಡೆದರೆ ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ ಎಂದು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಗುಡುಗಿದ್ದಾರೆ.
ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋಹತ್ಯೆ ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೋಹತ್ಯೆ ಈ ಹಿಂದಿನಿಂದಲೂ ಜಿಲ್ಲೆಯಲ್ಲಿ ನಡೆಯುತ್ತಿದೆ. ಈ ಹಿಂದೆ ಬಿಜೆಪಿ ಅವಧಿಯಲ್ಲೂ ಜಿಲ್ಲೆಯಲ್ಲಿ ಗೋಹತ್ಯೆ ಆಗಿದೆ ಎಂದು ತಿಳಿಸಿದ್ದಾರೆ.





