ಸಾಲದಿಂದ ಮನನೊಂದು ಯುವಕ ಆತ್ಮಹತ್ಯೆ
ಬೀದರ್: ಕೃಷಿಗಾಗಿ ತಾಯಿ ಮಾಡಿದ ಸಾಲದಿಂದ ಮನನೊಂದು ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ರಾಂಪೂರ್ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಗಣೇಶ್ (26) ಎಂದು ಗುರುತಿಸಲಾಗಿದೆ.
ಮೃತ ಗಣೇಶ್ ತಾಯಿ ಕೃಷಿಗಾಗಿ ಬ್ಯಾಂಕ್‌ನಲ್ಲಿ ಐದು ಲಕ್ಷ ಸಾಲ ಮಾಡಿದ್ದರು. ಇನ್ನೂ ಗಣೇಶ್ ಕೃಷಿಯನ್ನು ತಾವೇ ನೋಡಿಕೊಳ್ಳುತ್ತಿದ್ದರು. ಬಂದ ಸಾಲದಿಂದ ತೊಗರಿ ಬಿತ್ತನೆ ಮಾಡಿದ್ದರು. ಆದರೆ ಬೆಳೆ ಫಲವತ್ತಾಗಿ ಬರದೇ ಹಾಳಾಗಿ ಹೋಗಿತ್ತು. ಹೀಗಾಗಿ ಸಾಲ ಮರುಪಾವತಿಸಲು ಸಾಧ್ಯವಾಗದೇ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.





