ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಆರೋಪಿಯ ಬಂಧನ
ನೆಲಮಂಗಲ: ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಬಂಧಿಸಲಾಗಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮರಿಸ್ವಾಮಿ(42) ಎಂಬಾತ ಬಂಧಿತ ಆರೋಪಿ. ಬೆಂಗಳೂರು ಅಪರಾಧ ನಿಯಂತ್ರಣ ಕೋಶದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ತಂಡ ಆರೋಪಿಯನ್ನು ಬಂಧಿಸಿ, ಬಂಧಿತನಿಂದ ಸುಮಾರು 25 ಕೆ.ಜಿ. ತೂಕದ 2 ಆನೆ ದಂತಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿ ಡಿಸೆಂಬರ್ 17 ರಂದು ಬೆಳಗಿನ ಜಾವ 4.30 ರ ಸಮಯದಲ್ಲಿ ಅಕ್ರಮವಾಗಿ ಎರಡು ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ವೇಳೆ ಅರಣ್ಯಾಧಿಕಾರಿಗಳಾದ ಅಮೃತ್ ದೇಸಾಯಿ, ಸಿದ್ದರಾಜು, ಚಿದಾನಂದ್, ಅಶೋಕ್ ಕುಮಾರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿ, ಆನೆ ದಂತಗಳನ್ನ ವಶಕ್ಕೆ ಪಡೆಯಲಾಗಿದೆ.





