ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ: ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಜಾಮೀನು
ಮಂಗಳೂರು: ಬಿಜೈನಲ್ಲಿರುವ ಕಲರ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿ ಕಾರ್ಯಕರ್ತರಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜನವರಿ 23ರಂದು ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಆದಿತ್ಯ ಕಾಂಪ್ಲೆಕ್ಸ್ ನಲ್ಲಿ ಕಲರ್ಸ್ ಯೂನಿಸೆಕ್ಸ್ ಸೆಲೂನ್ ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ರಾಮ ಸೇನೆಯ ಕಾರ್ಯಕರ್ತರು ದಾಳಿ ಎಸಗಿದ್ದರು. ಕೃತೃದ ಸಂದರ್ಭದಲ್ಲಿ ಪೀಠೋಪಕರಣಗಳನ್ನು ಧ್ವಂಸ ಮಾಡಿ ಅಲ್ಲಿದ್ದ ಮಹಿಳಾ ಸಿಬಂದಿಗೆ ಜೀವ ಬೆದರಿಕೆ ಹಾಕಿದ್ದರು. ಘಟನೆ ಸಂಬಂಧಿಸಿ ಸೆಲೂನ್ ಮಾಲೀಕ ಸುಧೀರ್ ಶೆಟ್ಟಿ ಬರ್ಕೆ ಠಾಣೆಗೆ ದೂರು ನೀಡಿದ್ದರು.




