ಪ್ರೌಢ ಶಾಲೆಯ ಮೂವರು ಶಿಕ್ಷರಿಂದಲೇ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ

ಚೆನ್ನೈ: ಪ್ರೌಢ ಶಾಲೆಯ ಮೂವರು ಶಿಕ್ಷರಿಂದಲೇ ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಸಂತ್ರಸ್ಥೆಯ ಕುಟುಂಬ ಸದಸ್ಯರು ಹಾಗೂ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಷೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.