ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಚಾಕು ಇರಿದು ಪತ್ನಿಯನ್ನು ಹತ್ಯೆಗೈದ ಪತಿ
ಆನೇಕಲ್: ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ ಪತಿ ಚಾಕು ಇರಿದು ಹತ್ಯೆಗೈದಿರುವ ಘಟನೆ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ನಡೆದಿದೆ.
ಮೃತಳನ್ನು ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ ಶ್ರೀಗಂಗಾ (29) ಹಾಗೂ ಆರೋಪಿಯನ್ನು ಮೋಹನ್ ಎಂದು ಗುರುತಿಸಲಾಗಿದೆ.
ವರ್ಷಗಳ ಹಿಂದೆ ಮೃತ ಶ್ರೀಗಂಗಾ ಹಾಗೂ ಮೋಹನ್ ರಾಜು ವಿವಾಹವಾಗಿದ್ದರು. ಜೊತೆಗೆ ಆರು ವರ್ಷದ ಮಗನಿದ್ದ. ಎರಡು ಮೂರು ವರ್ಷಗಳ ಹಿಂದೆ ಮೋಹನ್ ತನ್ನ ಸ್ನೇಹಿತನ ಜೊತೆಗೆ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡಿದ್ದ. ಈ ವೇಳೆ ಇಬ್ಬರ ನಡುವೆ ಜಗಳವಾಗಿತ್ತು. ಕಳೆದ 8 ತಿಂಗಳ ಹಿಂದೆ ಇಬ್ಬರು ಬೇರ್ಪಟ್ಟಿದ್ದರು.




