ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ.
ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

