March 19, 2026

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್

0
images-1.jpeg

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.

ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮೈಸೂರಿನ ಹೃದಯ ಭಾಗದಲ್ಲಿನ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!