ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ: ಬಂದೂಕುಗಳು ವಶಕ್ಕೆ
ರಾಮನಗರ: ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯಲ್ಲಿ ನಡೆದಿದೆ.
ಅಂಬಾಡಹಳ್ಳಿ ಗ್ರಾಮದ ಶ್ರೀಧರ್, ಮಳವಳ್ಳಿ ತಾಲೂಕಿನ ಕುಂತೂರು ಗ್ರಾಮದ ರಮೇಶ್ ಬಂಧಿತ ಆರೋಪಿಗಳು. ಚನ್ನಪಟ್ಟಣ ತಾಲೂಕಿನ ಅಕ್ಕೂರು ಪೊಲೀಸರ ಕಾರ್ಯಾಚರಣೆ ವೇಳೆ ಅಕ್ರಮ ಬೆಳಕಿಗೆ ಬಂದಿದ್ದು, ಬಂಧಿತರಿಂದ 4 ಬಂದೂಕು, ಬಂದೂಕು ತಯಾರಿಸುವ ವಸ್ತುಗಳು ಮತ್ತು ಒಂದು ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.





