ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ: ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿದ ರಾಜ್ಯಪಾಲರು
ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆಯಾಗಿದೆ.
ಹಲವು ಲೋಪದೋಷಗಳನ್ನ ಗುರುತಿಸಿ ಸುಗ್ರೀವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲೇ ಮಸೂದೆ ಮಂಡಿಸಿ ಚರ್ಚೆ ಮಾಡಿ ಕಳುಹಿಸಿ ಎಂದು ಸುಗ್ರೀವಾಜ್ಞೆ ತಿರಸ್ಕರಿಸಿದ್ದಾರೆ. ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದ ಸರ್ಕಾರ ಈಗ ಸುಗ್ರೀವಾಜ್ಞೆ ಕರಡು ಬಿಲ್ ಪರಿಷ್ಕರಣೆ ಮಾಡಿ ಮಸೂದೆ ತರಬೇಕಿದೆ.




