ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ: ಮುಸ್ಲಿಂ ಬಾಹುಳ್ಯದ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿಕೊಂಡ BJP

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ.
ಕೇಜ್ರವಾಲ್‌ಗೆ 7000 ಮತಗಳ ಹಿನ್ನಡೆ, ಅತಿಶಿಗೆ 673 ಮತಗಳ ಹಿನ್ನಡೆ ಅನುಭವಿಸಿದ್ದಾರೆ. ದೆಹಲಿಯ ಮುಸ್ಲಿಂ ಬಾಹುಳ್ಯದ 12 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.