ದೆಹಲಿ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಸತತ 3ನೇ ಭಾರಿಯೂ ಶೂನ್ಯ ಸಂಪಾದನೆ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಮೂರನೇ ಭಾರಿಯೂ ಶೂನ್ಯ ಸಂಪಾದನೆ ಮಾಡುವ ಎಲ್ಲಾ ಲಕ್ಷಣಗಳು ಕಾಣುತ್ತಿದ್ದು ಬಿಜೆಪಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಫಲಿತಾಂಶದ ಟ್ರೆಂಡ್ ಪ್ರಕಾರ ಕ್ರಾಂಗ್ರೆಸ್ ಯಾವ ಕ್ಷೇತ್ರದಲ್ಲೂ ಮುನ್ನಡೆ ಕಾಯ್ದುಕೊಂಡಿಲ್ಲ. ಬಾದಿ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿತ್ತು. ನಂತರ ಹಿನ್ನಡೆ ಅನುಭವಿಸಿದ್ದು ಸ್ಪರ್ಧೆ ಮಾಡಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆಯಲ್ಲಿದೆ.