ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಎಸ್.ಮಂಜುನಾಥ್ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ದೀಪಿಕಾ ರೆಡ್ಡಿ 2,95,705 ಮತಗಳನ್ನು ಪಡೆದು ಎರಡನೇ ಸ್ಥಾನ ತಲುಪಿದ್ದಾರೆ. ಇನ್ನು ಅಬ್ದುಲ್ ರಹಿಮಾನ್ 45,968 ಮತ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.