February 2, 2026

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಮಹಿಳೆ ಸಾವು

0
image_editor_output_image383559614-1739176770006.jpg

ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಮಹಿಳೆ ಮೃತಪಟ್ಟ ಘಟನೆ ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್‍ನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ವಿನೋದಾ (39) ಎಂದು ಗುರುತಿಸಲಾಗಿದೆ. ಕಾಫಿ ಹಣ್ಣು ಕೊಯ್ಯುವ ಕೆಲಸಕ್ಕೆ ತೆರಳಿದ್ದ ವೇಳೆ ಆನೆ ದಾಳಿ ನಡೆಸಿದೆ. ಇದರಿಂದ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತ ಮಹಿಳೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ಮೂಲದವರು. ಅವರ ಕುಟುಂಬ ಕೂಲಿ ಕೆಲಸಕ್ಕಾಗಿ ಚಿಕ್ಕಮಗಳೂರಿನಕತ್ತಲೇಖಾನ್ ಎಸ್ಟೇಟ್‍ಗೆ ಬಂದಿದ್ದರು. ಇಂದು (ಫೆ.8) ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ಮಹಿಳೆ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!