ಚಿಕ್ಕಮಗಳೂರು: ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಹಲ್ಲೆ: ಐದು ಮಂದಿ ಬಜರಂಗದಳದ ಕಾರ್ಯಕರ್ತರ ಬಂಧನ
ಚಿಕ್ಕಮಗಳೂರು: ಶೃಂಗೇರಿಯಲ್ಲಿ ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವಿಚಾರವನ್ನೇ ನೆಪವಾಗಿಟ್ಟುಕೊಂಡು ದರ್ಗಾಕ್ಕೆ ಆಗಮಿಸುತ್ತಿದ್ದವರ ಕಾರನ್ನು ಅಡ್ಡಗಟ್ಟಿ ಬಜರಂಗದಳದ ಕಾರ್ಯಕರ್ತರೆನ್ನಲಾದ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಶೃಂಗೇರಿ ತಾಲೂಕಿನವರಾದ ನಾಗೇಂದ್ರ, ರವಿಸಂಜಯ್, ಕೀರ್ತನ್, ಪ್ರಸಾದ್ ಹಾಗೂ ರಜತ್ ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಓಮ್ಮಿ ಕಾರು, ಹೋಂಡಾ ಆಕ್ಟಿವಾ ಸ್ಕೂಟಿ, ಎರಡು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ಡಾ.ವಿಕ್ರಮ್ ಅಮಟೆ ತಿಳಿಸಿದ್ದಾರೆ.
ಉಡುಪಿ, ಕೊಪ್ಪ ಮೂಲದ ಕುಟುಂಬದವರ ಕಾರು ರವಿವಾರ ಮಲೆನಾಡು ಭಾಗದ ಪ್ರಸಿದ್ದ ದರ್ಗಾಕ್ಕೆ ಭೇಟಿ ನೀಡಿದ್ದರು. ಬಳಿಕ ಹಿಂದಿರುಗುತ್ತಿದ್ದ ವೇಳೆ ಇವರಿದ್ದ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.





