ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ:
ಓರ್ವ ಮೃತ್ಯು, ಮೂವರಿಗೆ ಗಾಯ
ಶ್ರೀರಂಗಪಟ್ಟಣ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹೊಸಹುಂಡಿ ಗೇಟ್ ಬಳಿ ನಡೆದಿದೆ.
ಚನ್ನಹಳ್ಳಿ ಗ್ರಾಮದ ಬೈಕ್ ಸವಾರ ದರ್ಶನ್(19) ಮೃತಪಟ್ಟ ಯುವಕ. ಹಿಂಬಂದಿ ಸವಾರ ಅಜಯ್(19) ಹಾಗೂ ಮತ್ತೊಂದು ಬೈಕಿನ ಸವಾರ ಕೃಷ್ಣಮೂರ್ತಿ(34) ಗಂಭೀರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಅರಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.





