March 20, 2025

ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

0

ಹಾಸನ: ಮದುವೆಯಾಗಲು ಪ್ರಿಯತಮೆ ನಿರಾಕರಿಸಿದ್ದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಬೈರಾಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದರ್ಶನ್ (22) ಆತ್ಮಹತ್ಯೆಗೆ ಶರಣಾದ ಯುವಕ. ದರ್ಶನ್ ಗಂಡಸಿ ಹೋಬಳಿ ಬೇವಿನಹಳ್ಳಿಯಲ್ಲಿರುವ ಅಜ್ಜಿ ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬೇವಿನಹಳ್ಳಿ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸಿ ಜೊತೆಯಲ್ಲಿ ಓಡಾಡಿದ್ದರು. ಬಿಎ ಮುಗಿಸಿ ವ್ಯವಸಾಯ ಮಾಡುತ್ತಿದ್ದ ದರ್ಶನ್ ಯುವತಿಗೆ ಮದುವೆಯಾಗೋಣ ಎಂದಿದ್ದ. ಆದರೆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.

 

 

Leave a Reply

Your email address will not be published. Required fields are marked *

error: Content is protected !!