ನಡುರಸ್ತೆಯಲ್ಲೇ ಹೊತ್ತಿ ಉರಿದ ಆಂಬುಲೆನ್ಸ್

ರಾಯಚೂರು: ನಗರದ ಹೊರವಲಯದ ಆಶಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಅಂಬುಲೆನ್ಸ್ ಹೊತ್ತಿ ಉರಿದಿದೆ.
ಮೃತದೇಹವನ್ನ ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್‌ನ ಇಂಜಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಅಂಬುಲೆನ್ಸ್‌ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.