ಮಗುವಿನೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ, ತನ್ನ ಮಗಳೊಂದಿಗೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ.
ಮೈಸೂರಿನ ನಿವಾಸಿ ಭಾರ್ಗವಿ (31), ಮಗಳು ದೀಕ್ಷಾ (03) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಭಾರ್ಗವಿಯನ್ನು ಪಾಂಡವಪುರ ತಾಲೂಕಿನ ಪ್ರದೀಪ್ ಕುಮಾರ್ ಎಂಬುವರಿಗೆ 5 ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಈ ದಂಪತಿ ಮೈಸೂರಿನ ಹೂಟಗಳ್ಳಿಯಲ್ಲಿ ಸದ್ಯ ವಾಸವಿದ್ದರು ಎಂದು ತಿಳಿದುಬಂದಿದೆ.
ಗಂಡ ಹೆಂಡತಿಯ ನಡುವೆ ಅಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.





