RCB ನಾಯಕನಾಗಿ ರಜತ್ ಪಾಟಿದಾರ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕನಾಗಿ ರಜತ್ ಪಾಟೀದಾರ್ ಅವರನ್ನ ನೇಮಕ ಮಾಡಲಾಗಿದೆ.
ಈ ಬಾರಿ ನಡೆದ ಮೆಗಾ ಆಯಕ್ಷನ್ನಲ್ಲಿ ತಂಡದ ನಾಯಕನಾಗಿದ್ದ ಫಾಫ್ ಡು ಪ್ಲೆಸ್ಸಿಸ್ ಅವರನ್ನು ಆರ್ಸಿಬಿ ಫ್ರಾಂಚೈಸಿ ಕೈ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಇದ್ದ ನಾಯಕ ಸ್ಥಾನಕ್ಕೆ ಇದೀಗ ಅವರನ್ನು ನೇಮಕ ಮಾಡಲಾಗಿದೆ.
RCB ತಂಡದ ನಾಯಕತ್ವಕ್ಕೆ ದೇಶೀಯ ಕ್ರಿಕೆಟ್ ನಲ್ಲಿ ನಾಯಕತ್ವದ ಅನುಭವ ಹೊಂದಿರುವ ರಜತ್ ಪಾಟೀದಾರ್ ಹಾಗೂ ಕೃನಾಲ್ ಪಾಂಡ್ಯರ ಹೆಸರುಗಳು ಮುನ್ನೆಲೆಗೆ ಬಂದಿದ್ದವು. ಇಂದು ಅಂತಿಮವಾಗಿ ರಜತ್ ಪಾಟೀದಾರ್ ರನ್ನು RCB ತಂಡದ ನೂತನ ನಾಯಕರನ್ನಾಗಿ ಘೋಷಿಸಲಾಗಿದೆ.