March 15, 2025

ಕಾರವಾರ: ಪದ್ಮಶ್ರೀ ಪುರಸ್ಕೃತೆ ಸುಕ್ರಿಜ್ಜಿ ನಿಧನ

0

ಕಾರವಾರ: ಜಾನಪದ ಕೋಗಿಲೆ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ (88) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು. ಬಡಗೇರಿ ಗ್ರಾಮದಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಿದ್ದರಿಂದ ಅದನ್ನು ತಡೆಯಲು ಹಲವು ದಶಕಗಳ ಹಿಂದೆ ಜನಾಂದೋಲನ ನಡೆಸಿದ್ದರು. 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

 

 

Leave a Reply

Your email address will not be published. Required fields are marked *

error: Content is protected !!