March 15, 2025

ಪ್ರೀತಿಗೆ ಕುಟುಂಬದಿಂದ ವಿರೋಧ: ವಿಷ ಸೇವಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಗಂಭೀರ

0

ಲಕ್ನೋ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಭ್‌ ಪಂತ್‌ ಉಳಿಸಿದ್ದ ವ್ಯಕ್ತಿ ಮತ್ತು ಆತನ ಪ್ರೇಯಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿತ್ತು. ಈ ವೇಳೆ ಪ್ರಿಯತಮೆ ಮೃತಪಟ್ಟಿದ್ದಾಳೆ.

2022 ರಲ್ಲಿ ಭಾರತೀಯ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ಅಪಘಾತವಾಗಿತ್ತು. ಅವರ ಜೀವವನ್ನು ಉಳಿಸಿದ್ದ 25 ವರ್ಷದ ಯುವಕ ರಜತ್ ಕುಮಾರ್, ಫೆ.9 ರಂದು ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಬುಚ್ಚಾ ಬಸ್ತಿ ಎಂಬ ಹಳ್ಳಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.

ಕುಮಾರ್ ಮತ್ತು 21 ವರ್ಷದ ಗೆಳತಿ ಮನು ಕಶ್ಯಪ್ ಇವರಿಬ್ಬರ ಪ್ರೀತಿಗೆ ಕುಟುಂಬಗಳು ವಿರೋಧ ವ್ಯಕ್ತಪಡಿಸಿದ್ದವು. ಹೀಗಾಗಿ, ಇಬ್ಬರೂ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ಕಶ್ಯಪ್ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾಳೆ. ಕುಮಾರ್ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾನೆ.

 

 

Leave a Reply

Your email address will not be published. Required fields are marked *

error: Content is protected !!