ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷ

ಕಲಬುರಗಿ : ಸರ್ವೇ ನಂಬರ್ 4- ರಲ್ಲಿ ಡಿಸಿಬಿ ತೆರಿಗೆ ಹೆಸರನ್ನು ನೋಂದಾಯಿಸಲು ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಓರ್ವ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ಕಾಳಗಿ ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಕಾಳಗಿ ತಾಲ್ಲೂಕು ವ್ಯಾಪ್ತಿಯ ರಾಜಪುರ್ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ರೆಡ್ಡಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ.
ರಾಜಪುರ್ ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಅವರಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ನಂಬರ್ 4- ರಲ್ಲಿ ಡಿಸಿಬಿ ತೆರಿಗೆ ಹೆಸರನ್ನು ನೋಂದಾಯಿಸಲು ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ಲೋಕಾಯುಕ್ತರಿಗೆ ದೂರು ನೀಡಿದರು.