March 22, 2026

ಚಿಕ್ಕಮಗಳೂರು: ಅಗ್ನಿಶಾಮಕ ದಳದ ವಾಹನಕ್ಕೆ ಸ್ಕೂಟಿ ಡಿಕ್ಕಿ:
ಓರ್ವ ಮಹಿಳೆ ಮೃತ್ಯು

0
n34256034616398976848250411eebd4281d35cec70d6735dabf0c2a1541ac06c6aee112677d57eb4c705e6.jpg

ಚಿಕ್ಕಮಗಳೂರು: ಅಗ್ನಿಶಾಮಕ ದಳದ ವಾಹನ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕು ವ್ಯಾಪ್ತಿಯ ದ್ಯಾವೇಗೌಡ ವೃತ್ತದಲ್ಲಿ ನಡೆದಿದೆ.

ಮುಮ್ತಾಜ್ (46) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಸ್ಕೂಟಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮೃತ ಮಹಿಳೆ ಹಿಂಬದಿಯ ಚಕ್ರಕ್ಕೆ ಸಿಲುಕಿದ್ದಾರೆ.

ಪರಿಣಾಮ ಅಗ್ನಿಶಾಮಕ ವಾಹನ ಅವರ ತಲೆಯ ಮೇಲೆ ಹರಿದಿದ್ದು ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕೊಪ್ಪ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!