ಮಹಾಕುಂಭಮೇಳಕ್ಕೆ ತೆರಳುತ್ತಿರುವ ವೇಳೆ ಭೀಕರ ರಸ್ತೆ ಅಪಘಾತ: 10 ಮಂದಿ ಸ್ಥಳದಲ್ಲೇ ಸಾವು
ಪ್ರಯಾಗ್ ರಾಜ್: ಬೊಲೆರೋ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನಪ್ಪದ ಘಟನೆ ಶುಕ್ರವಾರ ತಡರಾತ್ರಿ ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಛತ್ತೀಸಗಢದಿಂದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳಕ್ಕೆ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೊಲೆರೋ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೃತರನ್ನು ಛತ್ತೀಸಗಢದ ಕೊರ್ಬಾ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ 19 ಮಂದಿಯನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಯಾದವ್ ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಯಮುನಾನಗರ ಡಿಸಿಪಿ ವಿವೇಕ್ ಚಂದ್ರ ಯಾದವ್ ತಿಳಿಸಿದ್ದಾರೆ.





