ವಿಟ್ಲ: ಅಂಗಡಿಗೆ ಬಂದ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಪ್ರಕರಣ: ಆರೋಪಿ ಅಶ್ರಫ್ ಗೆ 5 ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ
ವಿಟ್ಲ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕೆಲವು ತಿಂಗಳ ಹಿಂದೆ ಕುದ್ದುಪದವು ಎಂಬಲ್ಲಿ ಆರೋಪಿ ಮಹಮ್ಮದ್ ಅಶ್ರಫ್(49) ಎಂಬಾತ ತನ್ನ ಅಂಗಡಿಗೆ ಬಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ವಿಟ್ಲ ಇನ್ಸ್ಪೆಕ್ಟರ್ ನಾಗರಾಜ್ ಎಚ್.ಇ ನೇತೃತ್ವದಲ್ಲಿ ತನಿಖಾಧಿಕಾರಿ ರತ್ನಕುಮಾರ್ ಸಹಾಯಕರಾದ ಕರುಣಾಕರ ಅವರು ತನಿಖೆ ಪೂರ್ತಿಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಆರೋಪಿಯ ಮೇಲಿದ್ದ ಆರೋಪ ಸಾಭಿತಾಗಿದ್ದು, ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಸರಕಾರದ ವಿಶೇಷ ಅಭಿಯಾಜಕರಾಗಿ ಸಹನ ದೇವಿ ವಾದಿಸಿದ್ದರು.





