March 16, 2026

ನೀರಿನಲ್ಲಿ ಯೋಗ ಮಾಡುವಾಗ ಯೋಗಪಟು ಸಾವು

0
image_editor_output_image2011758364-1739777426743.jpg

ಕೊಳ್ಳೇಗಾಲ: ನೀರಿನಲ್ಲಿ ಯೋಗ ಮಾಡುತ್ತಿರುವ ವೇಳೆ ಯೋಗಪಟುವೊಬ್ಬರು ಸಾವನಪ್ಪಿದ ಘಟನೆ ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ನಡೆದಿದೆ.

ಮೃತರನ್ನು ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಎಂದು ಗುರುತಿಸಲಾಗಿದೆ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್ ಕಾವೇರಿ ನದಿಗೆ ಇಳಿದಿದ್ದರು. ನಾಗರಾಜ್ ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ನಾಗರಾಜ್ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!