ಮಡಿಕೇರಿ: 40 ವಯಸ್ಸಾಗಿದ್ದರೂ ಆಗದ ಮದುವೆ: ಮನನೊಂದು ವ್ಯಕ್ತಿ ಆತ್ಮಹತ್ಯೆ
ಮಡಿಕೇರಿ: ವಯಸ್ಸಾಗಿದ್ದರೂ ಮದುವೆ ಆಗದಿರುವುದಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೋರ್ವ ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯ ಕೆ.ಬೋಯಿಕೇರಿಯಲ್ಲಿ ನಡೆದಿದೆ.
ಮೃತನನ್ನು ಮಡಿಕೇರಿ ತಾಲೂಕು ಐಯ್ಯಂಗೇರಿ ಸಣ್ಣಪುಲಿಕೋಟು ಗ್ರಾಮ ನಿವಾಸಿ ಬಿ.ಪಿ.ಅನಿಲ್ ಕುಮಾರ್ ಅಲಿಯಾಸ್ ಸತೀಶ್ (40) ಎಂದು ಗುರುತಿಸಲಾಗಿದ್ದು, ಮರದ ಆಚಾರಿ ಕೆಲಸ ಮಾಡುತ್ತಿದ್ದ.
ಕುಟುಂಬ ನಿರ್ವಹಣೆಗಾಗಿ ಕೆಲಸ ಅರಸಿಕೊಂಡು ಬಂದ್ದಿದ್ದವರು ಮಡಿಕೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಹಲವು ವರ್ಷಗಳ ನಂತರ ಮೃತ ಸತೀಶ್‌ನ ಅಣ್ಣ ಬೆಳ್ಯಪ್ಪ ವಿರಾಜಪೇಟೆ ನಗರದ ಚಿಕ್ಕಪೇಟೆಯಲ್ಲಿ ಮಳಿಗೆಯೊಂದನ್ನು ಬಾಡಿಗೆ ಪಡೆದಿದ್ದರು. ಅಲ್ಲಿ ಕೋವಿ ದುರಸ್ತಿ ಮಾಡುವ ಕೆಲಸವನ್ನು ಆರಂಭಿಸಿದರು. ಆದರೆ ಆಚಾರಿ ಕೆಲಸದ ಒತ್ತಡದಲ್ಲಿ ಸತೀಶ್ ಮದ್ಯ ಸೇವನೆ ಮಾಡುವ ಚಟವನ್ನು ಬೆಳೆಸಿಕೊಂಡಿದ್ದ.




